ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ
ಅಂಗಡಿ ಬೀದಿಯೊಳೊಂದು ಆಕಳ ಕರು ನುಂಗಿತು
ಲಂಘಿಸುವ ಹುಲಿಯ ಕಂಡು ನರಿಯು ನುಂಗಿತು
ಹುತ್ತದೊಳಾಡುವ ಸರ್ಪ ಮತ್ತ ಗಜವ ನುಂಗಿತು
ಉತ್ತರ ದಿಶೆಯೊಳು ಬೆಳುದಿಂಗಳಾಯಿತಮ್ಮ
ಯೋಗ ಮಾರ್ಗಿ ಕಾಗಿನೆಲೆಯಾದಿಕೇಶವರಾಯ
ಭಾಗವತರ ಬೆಡಗಿದು ಬೆಳುದಿಂಗಳಾಯಿತಮ್ಮ
Music
Courtesy:
ಸ್ಥಲ -
ಕನಕದಾಸರ ಕೀರ್ತನೆಗಳು
ವಿಷಯ -
ಅನುಭಾವದ ನಿಗೂಢ ಮುಂಡಿಗೆಗಳು