ಬಿತ್ತಾಕ ಹೋದಲ್ಲಿ ಬಿಡದೆ ಮಳೆ ಹೊಡೆದು
ಜತ್ತಿಗೆ ತೊಯ್ದು ಮಿಣಿ ತೊಯ್ದು
ಜತ್ತಿಗೆ ತೊಯ್ದು ಮಿಣಿ ತೊಯ್ದು - ಉಡಿಯಾಗಿನ
ಬಿತ್ತಬೀಜ ತೊಯ್ದು ಮೊಳಕೆ ಹೊಡೆದೊ
ಬಿತ್ತಲಿಲ್ಲ ಬೆಳೆಯಲಿಲ್ಲ ಮೊಳದುದ್ದ ತೆನೆ ಹಾಯ್ದೊ
ಮೆತ್ತಗೆ ಮೇಯಾಕ ಬಂದ ಗಿಣಿರಾಮ ನಿಬ್ಬೆರಗಾಗಿ ನಿಂತ
ಕಾಗಿನೆಲೆ ಕನಕದಾಸ ಹಾಕಿದ ಮುಂಡಿಗೆಯ
ತೂಗಿ ಒಡಚದಿದ್ದರೆ ಗೆಣೆಯ ಆದಿಕೇಶವನಾಣೆ
Music
Courtesy:
ಸ್ಥಲ -
ಕನಕದಾಸರ ಕೀರ್ತನೆಗಳು
ವಿಷಯ -
ಅನುಭಾವದ ನಿಗೂಢ ಮುಂಡಿಗೆಗಳು