ಏಳು ನಾರಾಯಣ ಏಳು ಲಕ್ಷ್ಮೀರಮಣ
ಏಳು ಶ್ರೀಗಿರಿಯೊಡೆಯ ವೆಂಕಟೇಶ
ಏಳಯ್ಯ ಬೆಳಗಾಯಿತು
ಕಾಸಿದ್ದ ಹಾಲುಗಳ ಕಾವಡಿಯಲಿ ತುಂಬಿ
ಲೇಸಾಗೆ ಹಾಲ್ಮೊಸರು ಬೆಣ್ಣೆಯಾ ಕಡೆದು
ಶೇಷಶಯನನೆ ಏಳು ಸಮುದ್ರ ಮಥನವ ಮಾಡು
ದೇಶ ಕೆಂಪಾಯಿತು ಏಳಯ್ಯ ಹರಿಯೆ
ಅರಳುಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ
ಸುರರು ಸುಜನರೆಲ್ಲ ತಂದಿಹರು
ಅರವಿಂದ ಲೋಚನ ಮದನ ಗೋಪಾಲ ಕೃಷ್ಣ
ನೆರೆ ಕೋಳಿ ಕೂಗಿತು ಏಳಯ್ಯ ಹರಿಯೆ
ದಾಸರೆಲ್ಲರು ಬಂದು ದೂಳಿದರ್ಶನಗೊಂಡು
ಲೇಸಾಗಿ ತಾಳದಂಡಿಗೆ ಪಿಡಿದು
ಶ್ರೀಶಾದಿಕೇಶವನೆ ನಿನ್ನ ನಾಮವ ಸರಿಸಿ
ಏಸೊಂದು ಸ್ತೋತ್ರವಗೈಯುತಿಹರೇಳಯ್ಯ