ಕೀರ್ತನೆ - 339     
 
ಹಸಿವರಿತು ತಾಯ್ತನ್ನ ಶಿಶುವಿಗೆ ಒಸೆದು ಮೊಲೆ ಕೊಡುವಂತೆ ನೀ ಪೋ ಹಿಸದೆ ಬೇರಿನ್ನಾರು ಪೋಷಕರಾಗಿ ಸಲಹುವರು ಬಸಿರೊಳಗೆ ಬ್ರಹ್ಮಾಂಡ ಕೋಟಿಯ ಪಸರಿಸಿದ ಪರಮಾತ್ಮ ನೀನೆಂ ದುಸಿರುತಿವೆ ವೇದಗಳು ರಕ್ಷಿಸು ನಮ್ಮನನವರತ