ಪುಟ್ಟಿಸಬೇಡವೊ ದೇವ ಎಂದಿಗು ಇಂಥ।
ಕಷ್ಟಪಟ್ಟು ತಿರುಗುವ ಪಾಪಿ ಜೀವನವ
ನರರ ಸ್ತುತಿಸಿ ನಾಲಗೆ ಬರಡು ಮಾಡಿಕೊಂಡು–
ದರ ಪೋಷಣೆಗಾಗಿ ಅವರಿವರೆನದೆ ||
ಧರೆಯೊಳು ಲಜ್ಜೆ ಮಾನಗಳೆಲ್ಲವೀಡಾಡಿ ।
ಪರರ ಪೀಡಿಸಿ ತಿಂಬ ಪಾಪಿ ಜೀವನವ
ಎಂಟುಗೇಣು ಶರೀರವ ಒಂದು ಗೇಣು ಮಾಡಿಕೊಂಡು।
ಪಂಟಿಸುತ್ತ ಮೆಲ್ಲಮೆಲ್ಲನೆ ಪೋಗಿ ॥
ಗಂಟಲಸೆರೆಗಳುಬ್ಬಿ ಕೇಳುವ ಸಂಕಟ ವೈ-।
ಕುಂಠಪತಿ ನೀನೆ ಬಲ್ಲೆ ಕಪಟನಾಟಕನೆ
ಲೆಕ್ಕದಲಿ ನೀ ಮೊದಲು ಮಾಡಿದಷ್ಟಲ್ಲದೆ ।
ಸಖ್ಯಕೆ ವೆಗ್ಗಳ ಕೊಡುವರುಂಟೆ ॥
ಕಕ್ಕುಲತೆ ಪಟ್ಟರಿಲ್ಲ ಕರುಣಾಳು ನಿನ್ನ ಮರೆ |
ಹೊಕ್ಕೆ ಎನ್ನನು ಕಾಯೊ ಪುರಂದರವಿಠಲ
Music
Courtesy:
ಸ್ಥಲ -
ಕೀರ್ತನೆ
ವಿಷಯ -
ಆತ್ಮ ನಿವೇದನೆ