ನೀನೇಕೊ ನಿನ್ನ ಹಂಗೇಕೊ - ನಿನ್ನ
ನಾಮದ ಬಲವೆನಗಿದ್ದರೆ ಸಾಕೊ
ಆ ಮರ ಈ ಮರವೆಂದೆನ್ನುತಿರೆ ರಾಮ -
ನಾಮವೆ ವ್ಯಾಧನ ಮುನಿಪನ ಮಾಡಿತು
ನಾರಾಯಣೆನ್ನದೆ ನಾರಗನೆನ್ನಲು |
ಘೋರ ಪಾತಕಿಯನು ನಾಮವೆ ಕಾಯ್ದಿತೊ
ತಂದೆ ಪ್ರಹ್ಲಾದನ ಬಾಧೆಯ ಪಡಿಸೆ - ಗೋ !
ವಿಂದನೆಂಬ ಸಿರಿನಾಮವೆ ಕಾಯ್ದಿತೊ
ಉತ್ತರೆಯ ಗರ್ಭದಿ ಸುತ್ತಲಸ್ತ್ರವಿರೆ ॥
ಚಿತ್ತಜಪಿತ ನಿನ್ನ ನಾಮವೆ ಕಾಯ್ದಿತೊ
ಕರಿಮಕರಿಗೆ ಸಿಲ್ಕಿ ಮೊರೆ ಇಡುತಿರುವಾಗ |
ಪರಮಪುರುಷ ಹರಿನಾಮವೆ ಕಾಯ್ದಿತೊ
ನಾರಿಯನೆಳತಂದು ಸೀರೆ ಸೆಳೆಯುತಿರೆ !
ದ್ವಾರಕಾಪತಿ ನಿನ್ನ ನಾಮವೆ ಕಾಯ್ದಿತೊ
ಹಸುಳೆ ಧ್ರುವರಾಯನು ಅಡವಿಗೆ ಪೋಪಾಗ ।
ವಸುದೇವಸುತ ನಿನ್ನ ನಾಮವೆ ಕಾಯ್ದಿತೊ
ನಿನ್ನ ನಾಮಕೆ ಸರಿಯಾವುದ ಕಾಣೆನೊ
ಪನ್ನಗಶಯನ ಶ್ರೀ ಪುರಂದರವಿಠಲ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ