ಕೀರ್ತನೆ - 13     
 
ಕಂಡೆ ನಾ ತಂಡ ತಂಡದ ಹಿಂಡು ಹಿಂಡು ದೈವ ಪ್ರಚಂಡ - ರಿಪು ಗಂಡ ಉದ್ದಂಡ ನರಸಿಂಹನ ಕಂಡೆನಯ್ಯ ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯ ಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದು ಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆ ಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ ಉರದೊಳಪ್ಪಳಿಸಿ ಅರಿ ಬಸಿರ ಸರಸರನೆ ಸೀಳಿ ಪರಿಪರಿಯಲಿ ಚರ್ಮ ಎಳೆದೆಳೆದು ಎಲುಬು ನರ ನರವನು ತೆಗೆದು ನಿರ್ಗಳಿತ ಶೋಣಿತ ಸುರಿಯೆ ಹರಿಹರಿದು ಕರುಳ ಕೊರಳೊಳಿಟ್ಟವನ ಪುರಜನರು ಹಾಯೆನಲು ಸುರರು ಹೂಮಳೆಗರೆಯೆ ತರತರದ ವಾದ್ಯ ಸಂಭ್ರಮಗಳಿಂದ ಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವ ಕರುಣಾಳು ಕಾಗಿನೆಲೆಯಾದಿಕೇಶವನ