ಮರವ ನುಂಗುವ ಪಕ್ಷಿ ಮನೆಯೊಳಗೆ ಬಂದಿದೆ - ಇದರ
ಕುರುಹ ಪೇಳಿ ಕುಳಿತಿರುವ ಜನರು
ಒ೦ಟಿ ಕೊ೦ಬಿನ ಪಕ್ಷಿ ಒಡಲೊಳಗೆ ಕರುಳಿಲ್ಲ
ಗಂಟಲು ಮೂರುಂಟು ಮೂಗು ಇಲ್ಲ
ಕುಂಟು ಮನುಜನ ತೆರದಿ ಕುಳಿತಿಹುದು ಮನೆಯೊಳಗೆ
ಎಂಟು ಹತ್ತರ ಭಕ್ಷ್ಯ ಭಕ್ಷಿಸುವುದು
ನಡುವೆ ಕಲಿಯುಂಬುವುದು ನಡುನೆತ್ತಿಲಿ ಬಾಯಿ
ಕಡು ಸ್ವರಗಳಿಂದ ಗಾನ ಮಾಡುವುದು
ಅಡವಿಯಲಿ ಹುಟ್ಟುವುದು ಅ೦ಗವೆರಡಾಗುವುದು
ಬಡತನ ಬಂದರೆ ಬಹಳ ರಕ್ಷಿಪುದು
ಕಂಜವದನೆಯರ ಕರದಲ್ಲಿ ನಲಿದಾಡುವುದು
ಎಂಜಲನುಣಿಸುವುದು ಮೂಜಗಕೆ
ರಂಜಿಪ ಶಿಖಾಮಣಿ ಸಿಂಹಾಸನದ ಮೇಲಿರ್ಪ
ಸಂಜೀವ ಪಿತ ಆದಿಕೇಶವನೆ ಬಲ್ಲ
Music
Courtesy:
ಸ್ಥಲ -
ಕನಕದಾಸರ ಕೀರ್ತನೆಗಳು
ವಿಷಯ -
ಅನುಭಾವದ ನಿಗೂಢ ಮುಂಡಿಗೆಗಳು